ಬೆಂಗಳೂರು : ಕ್ಯಾಂಟರ್ ವಾಹನ ಪಲ್ಟಿಯಾಗಿ ಚಾಲಕ ಮೃತಪಟ್ಟಂತಹ ಘಟನೆ ಬನ್ನೇರುಘಟ್ಟ ರಸ್ತೆಯ ಜೆಲ್ಲಿ ಮೆಷಿನ್ ಬಳಿ ನಡೆದಿದೆ.
ವೇಗವಾಗಿ ಬಂದಂತಹ ಕ್ಯಾಂಟರ್ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾರೆ. ಮೃತರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಘಟನೆ ನಡೆದ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟರ್ ವಾಹನ ಪಲ್ಟಿಯಾದ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಆಗಿತ್ತು.