
ಬೆಂಗಳೂರು : ನಟ, ನಿರೂಪಕ ಮಾಸ್ಟರ್ ಆನಂದ್ ಮಗಳು ವಂಶಿಕ ಹೆಸರಿನಲ್ಲಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಾಸ್ಟರ್ ಆನಂದ್ ಪುತ್ರಿ ವಂಶಿಕ ಹೆಸರು ಹೇಳಿಕೊಂಡು ನಿಶಾ ನರಸಪ್ಪ ಎಂಬ ಹೆಸರಿನ ಮಹಿಳೆಯು ಹಲವರಿಗೆ ಲಕ್ಷಾಂತರ ರೂ. ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಸದ್ಯ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮಕ್ಕಳ ಟ್ಯಾಲೆಂಟ್ ಶೋನಲ್ಲಿ ನಿಮ್ಮ ಮಕ್ಕಳಿಗೂ ಅವಕಾಶ ಕೊಡಿಸುವುದಾಗಿ ಹೇಳಿ ನೂರಾರು ಮಂದಿ ಪೋಷಕರಿಂದ ಲಕ್ಷಾಂತರ ರೂ. ವಂಚನೆ ಎಸಗಲಾಗಿದೆ. ಪ್ರಕರಣ ಸಂಬಂಧ ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ನಿಶಾಳನ್ನು ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.