
ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಅಸ್ತಿತ್ವದಲ್ಲಿರುವ COVID-19 ಮಾರ್ಗಸೂಚಿಗಳನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲು ನಿರ್ಧರಿಸಿದೆ.
ದೇಶದಲ್ಲಿ ಒಮಿಕ್ರಾನ್ ನಿಂದ ಕೊರೋನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಪತ್ರ ಬರೆಯಲಾಗಿದೆ.
ಕೊರೊನಾ ಸೋಂಕು ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಸಲಹೆ ನೀಡಲಾಗಿದೆ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲ ಪತ್ರ ಬರೆದಿದ್ದಾರೆ.
ಗೃಹ ಸಚಿವಾಲಯವು ಕೋವಿಡ್-19 ಮಾರ್ಗಸೂಚಿಗಳನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಿದೆ. ಕೇಂದ್ರ ಗೃಹ ಸಚಿವಾಲಯವು ಕೋವಿಡ್ -19 ಮಾರ್ಗಸೂಚಿಗಳನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಿದೆ. ಮತ್ತು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ತಮ್ಮ ಸಿಬ್ಬಂದಿಯನ್ನು ಕಡಿಮೆ ಮಾಡದಂತೆ ಸೂಚಿಸಿದೆ.