
ನವದೆಹಲಿ: ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರದಿಂದ 50,000 ರೂ. ಪರಿಹಾರ ನೀಡಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ರಾಜ್ಯ ಸರ್ಕಾರಗಳು ಈ ಮೊತ್ತವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ನೀಡುತ್ತವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ 50,000 ರೂ ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದು ಮಾತ್ರವಲ್ಲ, ಈಗಾಗಲೇ ಮೃತಪಟ್ಟವರ ಕುಟುಂಬದವರು ಮಾತ್ರವಲ್ಲದೆ ಭವಿಷ್ಯದಲ್ಲಿ ಕೊರೋನಾ ಸಾವುಗಳಿಗೂ ಪರಿಹಾರವನ್ನು ನೀಡಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.
ರಾಜ್ಯ ಸರ್ಕಾರವು ಈ ಮೊತ್ತವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ನೀಡುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸುಪ್ರೀಂ ಕೋರ್ಟ್ ಸೂಚನೆಗಳ ನಂತರ ಪರಿಹಾರದ ಕುರಿತು ಎನ್‌ಡಿಎಂಎ ಮಾರ್ಗಸೂಚಿಗಳನ್ನು ರಚಿಸಲಾಗಿದೆ.
ಪರಿಹಾರ ಪಡೆಯಲು ಅರ್ಹರಾದ ಕುಟುಂಬದವರು ಆಯಾ ಜಿಲ್ಲೆಗಳ ವಿಪತ್ತು ನಿರ್ವಹಣಾ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ, ವೈದ್ಯಕೀಯ ಪ್ರಮಾಣಪತ್ರದೊಂದಿಗೆ ‘ಕೊರೊನಾದಿಂದ ಸಾವು’ ಎಂದು ನಮೂದಿಸುವ ಪ್ರಮಾಣಪತ್ರವನ್ನು ಸಲ್ಲಿಸಬೇಕು.