ಜಾರ್ಖಂಡ್ : ಜಾರ್ಖಂಡ್ ನೂತನ ಸಿಎಂ ಆಗಿ ‘ಚಂಪೈ ಸೊರೆನ್’ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ರಾಂಚಿಯ ರಾಜಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲರು ಪ್ರತಿಜ್ಞಾನ ವಿಧಿ ಭೋಧಿಸಿದರು.
ಭೂ ಅಕ್ರಮ ಪ್ರಕರಣ, ಅಕ್ರಮ ಗಣಿಗಾರಿಕೆ ಸೇರಿದಂತೆ ಕೆಲ ಆರೋಪ ಎದುರಿಸುತ್ತಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅವರ ಆಪ್ತ ಹಾಗೂ ಪಕ್ಷದ ಹಿರಿಯ ನಾಯಕ ಚಂಪೈ ಸೊರೆನ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಇಂದು ಜಾರ್ಖಂಡ್ ನೂತನ ಸಿಎಂ ಆಗಿ ‘ಚಂಪೈ ಸೊರೆನ್’ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.