ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ವಿವಿಧ ಗಣ್ಯರು ಹಾಜರಿದ್ದರು.
ಚಂದ್ರಬಾಬು ನಾಯ್ಡು ನಾಯ್ಡು ಅವರು ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾದರು ಮತ್ತು 2019 ರವರೆಗೆ ಸೇವೆ ಸಲ್ಲಿಸಿದರು. ಅವರು 2019 ರ ಚುನಾವಣೆಯಲ್ಲಿ ಸೋತರು ಮತ್ತು 2024 ರವರೆಗೆ ವಿರೋಧ ಪಕ್ಷದ ನಾಯಕರಾಗಿ ಉಳಿದರು. ಜನಸೇನಾ ಪಕ್ಷದ ಅಧ್ಯಕ್ಷ ಕೊನಿಡೆಲಾ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಅವರು ಕೂಡ ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್ನಲ್ಲಿ ಪದಗ್ರಹಣ ನೆರವೇರಿತು. ಟಿಡಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ, ಟಿಡಿಪಿ, ಬಿಜೆಪಿ, ಜನಸೇನಾ ಪಕ್ಷಗಳನ್ನು ಒಳಗೊಂಡ ‘ಎನ್ಡಿಎ’ ಮೈತ್ರಿಕೂಟದ ಶಾಸಕರ ಸಭೆಯೂ ಮಂಗಳವಾರ ನಡೆದಿದ್ದು, ಈ ಸಭೆಯಲ್ಲೂ ನಾಯ್ಡು ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.