ಚನ್ನಪಟ್ಟಣ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ .ಪಿ ಯೋಗೇಶ್ವರ್ ಸ್ಪರ್ಧೆ ಬಗ್ಗೆ ನಮ್ಮ ಮುಖಂಡರ ಅಭಿಪ್ರಾಯ ಮುಖ್ಯ, ಯಾವುದೇ ದುಡುಕಿನ ನಿರ್ಧಾರ ಇಲ್ಲ. ಚಿಹ್ನೆ ಯಾವುದು ಎಂಬುದು ಇಂದು ಸಂಜೆ ನಿರ್ಧಾರವಾಗುತ್ತದೆ. ಗುರುವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.
ಸಿ ಪಿ.ಯೋಗೀಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸು ಗುಸು ಕೇಳಿ ಬರುತ್ತಿದೆ. ಯಾರೇ ಆಗಲಿ ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಸಿಎಂ ಕೂಡ ಹೇಳಿದ್ದಾರೆ.