ಬೆಂಗಳೂರು : ಬೆಂಗಳೂರಲ್ಲಿ ಹೊಸ ವರ್ಷಾಚರಣೆ ವೇಳೆ ಗಲಾಟೆ ನಡೆದಿದ್ದು, ಯುವಕನಿಗೆ ದುಷ್ಕರ್ಮಿಗಳು ಚಾಲು ಇರಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಬೆಂಗಳೂರಿನ ಕೆಪಿ ಅಗ್ರಹಾರದ ಗಣೇಶ ದೇವಾಲಯದ ಬಳಿ ಘಟನೆ ನಡೆದಿದೆ.ಹೊಸ ವರ್ಷಾಚರಣೆ ವೇಳೆ ಪಾರ್ಟಿ ಮಾಡಿದ ಬಳಿಕ ಯುವಕರ ನಡುವೆ ಗಲಾಟೆ ನಡೆದಿದೆ. ಪಾರ್ಟಿ ಬಳಿಕ ಕುಶಾಲ್ ಎಂಬಾತನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಕುಡಿದ ಅಮಲಿನಲ್ಲಿ ಚಾಕು ಇರಿದಿದ್ದಾರೆ.
ಗಂಭೀರವಾಗಿ ಗಾಯಗೊಂಡ ಯುವಕ ಕುಶಾಲ್ ನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.