ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ನಕಲಿ ಸಹಿ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಇಬ್ಬರು ಅಧಿಕಾರಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಪ್ರತಿ ಟೆಂಡರ್ ಗೂ ಲಕ್ಷ ಲಕ್ಷ ರೂಪಾಯಿ ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ಕೃಷಿ ಇಲಾಖೆಯ ಅಧಿಕಾರಿಗಳ ನಕಲಿ ಸಹಿ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಪ್ರಕರಣ ಬರೆದ ಆರೋಪ ಸಂಬಂಧ ಸಿಐಡಿ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದೆ.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಹಾಗೂ ಕೃಷಿ ಇಲಾಖೆಯ ಅಧಿಕಾರಿ ಸುದರ್ಶನ್ ಬಂಧಿತ ಆರೋಪಿಗಳಾಗಿದ್ದು, ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.