ಬೆಳಗಾವಿ : ಶಾಸಕ ರಮೇಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅಪೆಕ್ಸ್ ಬ್ಯಾಂಕ್ ನಿಂದ 439 ಕೋಟಿ ರೂ. ಸಾಲ ಪಡೆದು, ಮರುಪಾವತಿಸದ ಹಿನ್ನೆಲೆಯಲ್ಲಿ ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿತ್ತು.
ಸಕ್ಕರೆ ಕಾರ್ಖಾನೆ ಮೇಲೆ ಇಂದು ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಈ ಕಾರ್ಖಾನೆಯನ್ನು ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ನೋಡಿಕೊಳ್ಳುತ್ತಿದ್ದಾರೆ.