ಬೆಂಗಳೂರು : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು, ಲೋಕಾಯುಕ್ತ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಆಗಮಿಸಿದ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ಮುಡಾ ಹಗರಣ ಸಂಬಂಧ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿತ್ತು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ಜಮೀನು ಮಾಲೀಕ ದೇವರಾಜು ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಸಾಕ್ಷಾಧಾರ ಕೊರತೆಯಿದೆ. ನಾಲ್ವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಲೋಕಾಯುಕ್ತ ತಿಳಿಸಿತ್ತು.