ಉಡುಪಿ : ಉಡುಪಿಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಧಿಡೀರ್ ಪ್ರವಾಹ ಸೃಷ್ಟಿಸಿದೆ.
ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಬಮ್ಮನಗುಂಡಿ ಹೊಳೆ ಉಕ್ಕಿ ಹರಿದು ಪ್ರವಾಹ ಸೃಷ್ಟಿಸಿತ್ತು.
ಈ ವೇಳೆ ಹಳ್ಳದಲ್ಲಿ ಕೊಚ್ಚಿ ಹೋಗಿ ವೃದ್ದೆಯೊಬ್ಬರು ಮೃತಪಟ್ಟಿದ್ದಾರೆ. ವೃದ್ದೆ ಚಂದ್ರಾಗೌಡ್ತಿ (80) ಎಂಬುವವರು ಹಳ್ಳ ದಾಟಲು ಹೋಗಿ ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗಿದೆ. ಮುದ್ರಾಡಿ ಸಮೀಪದ ಬಲ್ಲಾಡಿ ಎಂಬಲ್ಲಿ ನಿನ್ನೆ ಮಧ್ಯಾಹ್ನ ಹಠಾತ್ ಸುರಿದ ಭಾರೀ ಮಳೆಗೆ ಜಲ ಪ್ರವಾಹ ಉಂಟಾಗಿದ್ದು, ಇದರ ಪರಿಣಾಮ ಹಲವು ಮನೆಗಳು ಹಾಗೂ ತೋಟಗಳಿಗೆ ನೀರು ನುಗ್ಗಿವೆ. ಕಬ್ಬಿನಾಲೆಯ ಬೆಟ್ಟದಲ್ಲಿ ಉಂಟಾದ ಮೇಘಸ್ಫೋಟದಿಂದ ಕೇವಲ ಕೆಲವೇ ಗಂಟೆಯಲ್ಲಿ ಭಾರೀ ಮಳೆಯಾಗಿ ಜಲ ಪ್ರವಾಹ ಸೃಷ್ಠಿಯಾಗಿದೆ.