ನವದೆಹಲಿ : ಜಾರಿ ನಿರ್ದೇಶನಾಲಯದ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.
ಕೇಜ್ರಿವಾಲ್ ಅವರನ್ನು ಪ್ರತಿನಿಧಿಸುವ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ರಿಮಾಂಡ್ ಪ್ರಕ್ರಿಯೆಗಳೊಂದಿಗಿನ ಸಂಘರ್ಷದಿಂದಾಗಿ ಎಎಪಿ ನಾಯಕ ಅರ್ಜಿಯನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದರು.
ಅರವಿಂದ್ ಕೇಜ್ರಿವಾಲ್ ಅವರ ಕುಟುಂಬವನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಸಚಿವ ಗೋಪಾಲ್ ರಾಯ್ ಶುಕ್ರವಾರ ಬೆಳಿಗ್ಗೆ ಹೇಳಿದ್ದಾರೆ. ದೆಹಲಿ ಮುಖ್ಯಮಂತ್ರಿಯ ಬಂಧನದ ಕೆಲವೇ ಗಂಟೆಗಳ ನಂತರ ಕುಟುಂಬವನ್ನು ಭೇಟಿ ಮಾಡದಂತೆ ಅಧಿಕಾರಿಗಳು ತಡೆದಿದ್ದಾರೆ ಎಂದು ಹೇಳಿದ್ದಾರೆ.
“ನಾನು ಅವರ ಕುಟುಂಬವನ್ನು ಭೇಟಿಯಾಗಲು ಇಲ್ಲಿಗೆ ಬಂದಿದ್ದೇನೆ, ಆದರೆ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ. ಯಾವ ಕಾನೂನಿನ ಅಡಿಯಲ್ಲಿ ಅವರ ಕುಟುಂಬವನ್ನು ಭೇಟಿಯಾಗದಂತೆ ನನ್ನನ್ನು ತಡೆಯಲಾಗುತ್ತಿದೆ? ರೈ ಸುದ್ದಿಗಾರರಿಗೆ ತಿಳಿಸಿದರು.