ಬೆಂಗಳೂರು : ಜೆಡಿಎಸ್ ನಿಂದ ಸಿಎಂ ಇಬ್ರಾಹಿಂ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ. ಇಂದು ಜೆಪಿ ಭವನದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ನೇತೃತ್ವದಲ್ಲಿ ಮಹತ್ವದ ಕಾರ್ಯಕಾರಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ ಇಬ್ರಾಹಿಂ ಅವರನ್ನು ಕೆಳಗಿಳಿಸಲಾಗಿತ್ತು. ನಂತರ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಕೂಡ ಮಾಡಲಾಗಿತ್ತು. ಇದೀಗ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಅವರ ನೇತೃತ್ವದಲ್ಲಿ ನಡೆದಂತ ಕಾರ್ಯಕಾರಿಣಿ ಸಭೆಯಲ್ಲಿ ಅಧಿಕೃತವಾಗಿ ಸಿಎಂ ಇಬ್ರಾಹಿಂ ಉಚ್ಚಾಟನೆಯ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅದೇ ರೀತಿ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾಣು ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದೆ.
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ವಿರೋಧಿಸಿದ್ದ ಸಿಎಂ ಇಬ್ರಾಹಿಂ ಪ್ರತ್ಯೇಕ ಸಭೆ ನಡೆಸಿದ್ದರು. ಪಕ್ಷದ ನಾಯಕರ ನಡೆಯನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯ ಸಮಿತಿ ವಿಸರ್ಜಿಸಿ ಅಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಅವರನ್ನು ಕೈ ಬಿಟ್ಟು ಹೆಚ್.ಡಿ. ಕುಮಾರಸ್ವಾಮಿಯವರಿಗೆ ಸಾರಥ್ಯ ವಹಿಸಲಾಗಿತ್ತು. ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿತ್ತು. ಪಕ್ಷ ವಿರೋಧಿ ಹೇಳಿಕೆ ಆರೋಪದ ಮೇಲೆ ಜೆಡಿಎಸ್ ಅವರನ್ನು ಪದಚ್ಯುತಿ ಗಳಿಸಿದೆ.