ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದ್ದು, ಹೆಚ್ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ಮಾಡಲಾಗಿದೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ನಾಯಕತ್ವದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮೈತ್ರಿಗೆ ನನ್ನ ಬೆಂಬಲವಿಲ್ಲ, ನಾವು ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಸಿ.ಎಂ ಇಬ್ರಾಹಿಂ ಹೇಳಿಕೆ ನೀಡಿದ್ದರು. ಅಲ್ಲದೇ ನಾನು ಪ್ರತ್ಯೇಕವಾಗಿ ಕೋರ್ ಕಮಿಟಿಯನ್ನು ರಚನೆ ಮಾಡುತ್ತೇನೆ ಎಂದು ಹೇಳುವ ಮೂಲಕ ಇಬ್ರಾಹಿಂ ಹೆಚ್ಡಿಕೆ ಗೆ ಸೆಡ್ಡು ಹೊಡೆದಿದ್ದರು. ಇದು ಜೆಡಿಎಸ್ ನಾಯಕರನ್ನು ಬಹಳ ಕೆರಳಿಸಿತ್ತು.
ಈ ಹಿನ್ನೆಲೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದ್ದು, ಹೆಚ್ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ಮಾಡಲಾಗಿದೆ.