ಬೆಂಗಳೂರು : ‘ ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಎಫ್ ಐ ಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ-1, ಪತ್ನಿ ಪಾರ್ವತಿ ಎ-2 ಎಂದು ಹೆಸರಿಸಲಾಗಿದೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ. ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ. ಖಾಸಗಿ ದೂರಿನಲ್ಲಿ ಉಲ್ಲೇಖಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಮೂಲಕ ಸಿಎಂ ಸಿದ್ದರಾಮಯ್ಯ ಮುಡಾ ಸಂಕಷ್ಟ ಎದುರಾಗಿದ್ದು, ಕೋರ್ಟ್ ಆದೇಶದಂತೆ ಇಂದು ಎಫ್ ಐ ಆರ್ ದಾಖಲಿಸಲಾಗಿದೆ.ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದರು.ಮೈಸೂರು ಬಿಜೆಪಿ ಕಚೇರಿ ಬಳಿ ಸಾವಿರಾರು ಬಿಜೆಪಿ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ರಾಜೀನಾಮೆಗೆ ಆಗ್ರಹಿಸಿದ್ದರು. ಈ ವೇಳೆ ಪೊಲೀಸರು ಬಿಜೆಪಿ ಕಚೇರಿ ಬಳಿ ಹಾಕಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ, ಅದರ ಮೇಲೆ ಹತ್ತಿ ಹೊರ ಹೋಗಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ.