ಮಂಡ್ಯ : ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಇಂದು ಎಸ್ ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಎಸ್ ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಸಚಿವ ವೆಂಕಟೇಶ್ , ಹೆಚ್ ಕೆ ಪಾಟೀಲ್, ಸ್ಪೀಕರ್ ಯುಟಿ ಖಾದರ್, ಡಿಸಿಎಂ ಡಿಕೆಶಿ, ಸಚಿವ ಕೃಷ್ಣಭೈರೇಗೌಡ , ನಿಖಿಲ್ ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಎಸ್ ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಎಸ್ ಎಂ ಕೃಷ್ಣ ಅವರ ಪಾರ್ಥಿವ ಶರೀರ ತಲುಪಿದ್ದು, ಸಾರ್ವಜನಿಕರು ಸರತಿ ಸಾಲಿನಲ್ಲಿ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ಎಸ್ ಎಂ ಕೃಷ್ಣ ಅವರ ಅಂತಿಮ ವಿಧಿ ವಿಧಾನ ಕಾರ್ಯ ಆರಂಭವಾಗಲಿದೆ.
ಅಜಾತಶತ್ರುವಿನ ಅಂತಿಮಯಾತ್ರೆ!
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಹೊತ್ತ ವಾಹನವು ಮದ್ದೂರಿಗೆ ತೆರಳುವ ವೇಳೆ ಚನ್ನಪಟ್ಟಣದಲ್ಲಿ ಅಪಾರ ಸಂಖ್ಯೆಯ ಜನರು ಅವರ ಅಂತಿಮ ದರ್ಶನ ಪಡೆದರು. pic.twitter.com/qffK5qrpuu
— DK Shivakumar (@DKShivakumar) December 11, 2024