ಬೆಂಗಳೂರು : ಮಂಡಿ ನೋವಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧಕ್ಕೆ ವ್ಹೀಲ್ ಚೇರ್ ನಲ್ಲೇ ಆಗಮಿಸಿದ್ದಾರೆ.
ಮಂಡಿನೋವಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದರು. ಮನೆಯಲ್ಲಿ 2-3 ದಿನಗಳ ಕಾಲ ವಿಶ್ರಾಂತಿ ಪಡೆದ ಸಿಎಂ ಸಿದ್ದರಾಮಯ್ಯ ನಂತರ ಬಹಿರಂಗ ಕಾರ್ಯಕ್ರಮ, ಸಭೆಯಲ್ಲಿ ಭಾಗಿಯಾಗಿದ್ದರು.
ಮುಂದಿನ ತಿಂಗಳು ಬಜೆಟ್ ಮಂಡನೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಹಾಗಾಗಿ ಇಂದು ಕಾರು ಇಳಿದ ಸಿಎಂ ಸಿದ್ದರಾಮಯ್ಯ ವ್ಹೀಲ್ ಚೇರ್ ನಲ್ಲೇ ಆಗಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಿದೆ.