ಬೆಂಗಳೂರು : ಮುಡಾ ಹಗರಣದ ಬಗ್ಗೆ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾಳೆ ಬೆಳಗ್ಗೆ 10 ಗಂಟೆ ತುರ್ತು ಶಾಸಕಾಂಗ ಪಕ್ಷದ ಸಭೆ (CLP Meeting) ಕರೆದಿದ್ದಾರೆ.
ನಾಳೆ ಬೆಳಗ್ಗೆ 10 ಗಂಟೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್ ಪಿ ಸಭೆ ನಡೆಯಲಿದ್ದು, ಮುಂದಿನ ಸಿಎಂ ನಡೆ ಬಹಳ ಕುತೂಹಲ ಮೂಡಿಸಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಸಂಕಷ್ಟ ಎದುರಾಗಿದೆ. ಹೈಕೋರ್ಟ್ ತಿರ್ಪು ಪ್ರಕಟವಾಗುತ್ತಿದ್ದಂತೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳು ಸಿಎಂ ಕಾವೇರಿ ನಿವಾಸಕ್ಕೆ ದೌಡಾಯಿಸಿದ್ದಾರೆ.