ಬೆಂಗಳೂರು : ಇಂದು ರಾಜ್ಯಾದ್ಯಂತ 69 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬಹಳ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.. ವಿವಿಧ ಶಾಲೆಯ ಮಕ್ಕಳು ಆಕರ್ಷಕ ಪಥ ಸಂಚಲನ ನಡೆಸಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು.
ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾಡಭಾಷೆ ಕನ್ನಡ ಆಡು ಭಾಷೆ, ಅನ್ನದ ಭಾಷೆಯಾಗಲಿ. ನಿತ್ಯ ಬದುಕಿನಲ್ಲಿ ಹೆಚ್ಚೆಚ್ಚು ಕನ್ನಡ ಭಾಷೆಯನ್ನು ಬಳಸೋಣ, ಆ ಮೂಲಕ ಕನ್ನಡವನ್ನು ಬೆಳೆಸೋಣ. “ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ” ಎಂದು ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.