ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು “ಬೆಂಗಳೂರು ಟೆಕ್ ಸಮ್ಮಿಟ್” ಕಾರ್ಯಕ್ರಮ ಉದ್ಘಾಟಿಸಿ, ಶುಭ ಕೋರಿದರು.
ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ಗಳ ಸಹಯೋಗದಲ್ಲಿ ಆಯೋಜಿಸಿರುವ ‘ಬೆಂಗಳೂರು ಟೆಕ್ ಶೃಂಗಸಭೆ-2023’ ನವೆಂಬರ್ 29 ರಿಂದ ಡಿಸೆಂಬರ್ 1 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಟೆಕ್ ಶೃಂಗಸಭೆಯು ಗಡಿಗಳನ್ನು ಮೀರಿ ಜಾಗತಿಕ ಸಂಪರ್ಕವನ್ನು ಬೆಸೆಯಲಿದ್ದು,’ಬ್ರೇಕಿಂಗ್ ಬೌಂಡರೀಸ್’ ಈ ವರ್ಷದ ಥೀಮ್ ಆಗಿದೆ. ಈ ಸಮ್ಮೇಳನದಲ್ಲಿ ವಿಶ್ವದ 30ಕ್ಕೂ ಹೆಚ್ಚು ರಾಷ್ಟ್ರಗಳು ಭಾಗವಹಿಸಲಿದ್ದು, 75ಕ್ಕೂ ಅಧಿಕ ಸೆಷನ್‌ಗಳು, 400ಕ್ಕೂ ಹೆಚ್ಚು ಭಾಷಣಕಾರರು, 350ಕ್ಕೂ ಅಧಿಕ ಸ್ಟಾರ್ಟ್‌ಅಪ್‌ಗಳು, 600ಕ್ಕೂ ಹೆಚ್ಚು ಪ್ರದರ್ಶಕರು ಮತ್ತು 20,000ಕ್ಕಿಂತಲೂ ಹೆಚ್ಚು ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ.
ಈ ವರ್ಷದ ಬೆಂಗಳೂರು ಟೆಕ್ ಶೃಂಗಸಭೆಯ ಪ್ರಮುಖ ಅಂಶವೆಂದರೆ ಚಂದ್ರಯಾನ-3 ಇಸ್ರೋ-ಇಂಡಸ್ಟ್ರಿ ಪೆವಿಲಿಯನ್, ಇದು ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತದ ಮಹತ್ವದ ಉಪಸ್ಥಿತಿಯನ್ನು ಸಂಕೇತಿಸುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು ಟೆಕ್ ಶೃಂಗಸಭೆ-2023ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ವಿವರಗಳಿಗಾಗಿ ಭೇಟಿ ನೀಡಿ : www.bengalurutechsummit.com