ವಿಜಯನಗರ : ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಲು ಹೋದರೆ ಭಸ್ಮ ಆಗುತ್ತಾರೆ ಎಂದು ಸಚಿವ ಜಮೀರ್ ಹೇಳಿದ್ದಾರೆ.
ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಾದ್ರೂ ಮುಟ್ಟಲು ಹೋದರೆ ಭಸ್ಮ ಆಗುತ್ತಾರೆ, ಸಿಎಂ ಸಿದ್ದರಾಮಯ್ಯ ಕುರ್ಚಿ ಮುಟ್ಟಲು ಸಾಧ್ಯನಾ ಏನ್ರೀ..!..?
ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಿಕೆ ಶಿವಕುಮಾರ್ ಇದ್ದಾರೆ. ಆದ್ದರಿಂದ ಈ 2 ಸ್ಥಾನ ಬದಲಾವಣೆ ಚರ್ಚೆ ಬರಲ್ಲ. ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸದ್ಯಕ್ಕೆ ಖಾಲಿಯಿಲ್ಲ ಎಂದು ಸಚಿವ ಜಮೀರ್ ಹೇಳಿದರು.