alex Certify BREAKING : ‘ಮೈಕ್ರೋ ಫೈನಾನ್ಸ್’ ಕಂಪನಿಗಳಿಗೆ ರಾಜ್ಯ ಸರ್ಕಾರದಿಂದ ಅಂಕುಶ, ‘CM ಸಿದ್ದರಾಮಯ್ಯ’ ಖಡಕ್ ಸೂಚನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಮೈಕ್ರೋ ಫೈನಾನ್ಸ್’ ಕಂಪನಿಗಳಿಗೆ ರಾಜ್ಯ ಸರ್ಕಾರದಿಂದ ಅಂಕುಶ, ‘CM ಸಿದ್ದರಾಮಯ್ಯ’ ಖಡಕ್ ಸೂಚನೆ.!

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ನವರು ಸಾಲ ವಸೂಲಿ ವೇಳೆ ಆರ್ಬಿಐ ನ ನಿಯಮಗಳನ್ನು ಮೀರಿ ಕಿರುಕುಳ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ವರದಿಯಾಗುತ್ತಿದ್ದು, ಈ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಹಾಕುವ ಸಂಬಂಧ ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು.

ಈ ವೇಳೆ ನಿಯಮ ಮೀರಿ ಸಾಲ ವಸೂಲಿ ಮಾಡಿದಲ್ಲಿ ಕಠಿಣ ಕ್ರಮದ ಎಚ್ಚರಿಕೆಯನ್ನು ಬ್ಯಾಂಕ್, ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳಿಗೆ ನೀಡಿದ್ದೇನೆ.ಆರ್ಬಿಐನ ನಿಯಮ ಮೀರಿ ಸಾಲ ನೀಡುವ ಮತ್ತು ಸಾಲ ವಸೂಲಾತಿ ಮಾಡುವ ಮೈಕ್ರೋ ಫೈನಾನ್ಸ್ ಗಳ ಮೇಲೆ ಕಠಿಣ ಕ್ರಮ ನಿಶ್ಚಿತ ಎಂದಿದ್ದಾರೆ.

ಮೈಕ್ರೋ ಫೈನಾನ್ಸ್ಗಳಿಗೆ ಸರ್ಕಾರದ ಅಂಕುಶ

ಬ್ಯಾಂಕಿಂಗ್, ಫೈನಾನ್ಸ್ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಮೇಲೆ ಸಿಎಂ ಅಸಮಾಧಾನ
“ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯ೦ತ್ರಿಸಲು ಏನು ಮಾಡಿದ್ದೀರಿ? ಅಂತಹ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ?
ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?
ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ?

“ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?ಆರ್.ಬಿ.ಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಮರುಪಾವತಿಯ ಸಾಮರ್ಥ್ಯ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?

ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ ಕೆವೈಸಿ ಮಾಡಿಸುತ್ತಿಲ್ಲ ಏಕೆ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು ಅಲ್ಲವಾ?”“ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.
ಒಬ್ಬರೇ ಸಾಲಗಾರರು ಬೇರೆ ಬೇರೆ ಗುರುತಿನ ಚೀಟಿ ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ..? ಎಂದು ಪ್ರಶ್ನಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...