ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಖದ್ದು ಸಿಎಂ ಸಿದ್ದರಾಮಯ್ಯ ಅವರೇ ಸೂಚನೆ ನೀಡಿದ್ದಾರೆ.
ಈ ವಿಚಾರದಲ್ಲಿ ಸರ್ಕಾರಕ್ಕೆ ಮುಖಭಂಗವಾಗಬಾರದೆಂದು ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಖದ್ದು ಸಿಎಂ ಸಿದ್ದರಾಮಯ್ಯ ಅವರೇ ಸೂಚನೆ ನೀಡಿದ್ದಾರೆ.ತನಿಖೆ ಬಳಿಕ ಮತ್ತೆ ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಹಾಗೂ ಈ ಪ್ರಕರಣವನ್ನು ಸಿಬಿಐಗೆ ನೀಡುವ ಸಾಧ್ಯತೆಯಿದೆ.
ವಾಲ್ಮೀಕಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸಂಬಂಧಪಟ್ಟ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿತ್ತು.