ಬೆಳಗಾವಿ : ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.
ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದೆ. ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ. ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದಿದ್ದಾರೆ.
ಬೆಳಗಾವಿ ಹಾಗೂ ಮಹಾಲಿಂಗಪುರದ ಇಬ್ಬರು ಯೋಧರಾದ ದಯಾನಂದ ತಿರುವಣ್ಣವರ್ ಹಾಗೂ ಮಹೇಶ್ ಮಾರಿಗೊಂಡ ಅವರ ಅಂತ್ಯಕ್ರಿಯೆ ಬೆಳಗಾವಿಯಲ್ಲಿ ನಡೆಯಲಿದೆ. ಯೋಧ ಅನೂಪ್ ಅವರ ಅಂತ್ಯಕ್ರಿಯೆ ಉಡುಪಿಯ ಕುಂದಾಪುರದ ಅವರ ಹುಟ್ಟೂರಿನಲ್ಲಿ ನಡೆಯಲಿದೆ.
ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದೆ.
ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ… pic.twitter.com/erterWW6Gu
— Siddaramaiah (@siddaramaiah) December 26, 2024