ಯಾದಗಿರಿ : ಹೃದಯಾಘಾತದಿಂದ ನಿಧನರಾದಂತ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜಾ ವೆಂಕಟಪ್ಪನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪನಮನ ಸಲ್ಲಿಸಿದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ರಾಜಾ ವೆಂಕಟಪ್ಪ ನಾಯಕ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.