ಹೊಸಪೇಟೆ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಶಂಕಿತ ಉಗ್ರನ ಸುಳಿವು ಸಿಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಶಂಕಿತ ಉಗ್ರನ ಸುಳಿವು ಸಿಕ್ಕಿದ್ದು, ಶೀಘ್ರವೇ ಶಂಕಿತ ಉಗ್ರನ ಬಂಧನವಾಗುತ್ತದೆ ಎಂದು ತಿಳಿಸಿದ್ದಾರೆ.
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಹೋಟೆಲ್ನಲ್ಲಿ ಸ್ಫೋಟ ಸಂಭವಿಸಿದೆ. ಅಪರಿಚಿತ ವ್ಯಕ್ತಿ ಇಟ್ಟು ಹೋಗಿರುವ ಬ್ಯಾಗ್ನಿಂದ ಸ್ಫೋಟ ಸಂಭವಿಸಿದ್ದು, 9 ಜನ ಗಾಯಗೊಂಡಿದ್ದಾರೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.