alex Certify BREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮಂಡನೆಗೆ ಕ್ಷಣ ಶುರುವಾಗಿದ್ದು, ಈಗಾಗಲೇ ಬಜೆಟ್ ಪ್ರತಿಗಳನ್ನು ಸಿಬ್ಬಂದಿಗಳು ವಿಧಾನಸೌಧದಕ್ಕೆ ತಂದಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು 14 ನೇ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಅವಧಿಯ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಇದಾಗಲಿದೆ. ಈಗಾಗಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇದೀಗ 14 ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಸಿದ್ದರಾಮಯ್ಯ  ಬಜೆಟ್‌ ಮೇಲೆ ರಾಜ್ಯ ಜನರ ನಿರೀಕ್ಷೆ ಹೆಚ್ಚಾಗಿದೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಬಜೆಟ್‌ ಮೇಲೆ ರಾಜ್ಯದ ಜನರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಇವುಗಳನ್ನೆಲ್ಲಾ ಗಮನದಲ್ಲಿ ಇರಿಸಿಕೊಂಡು, ಮುಂದಿನ ಚುನಾವಣೆಗೂ ಅನುಕೂಲವಾಗುವಂತೆ, ಶ್ರೀಸಾಮಾನ್ಯನಿಗೆ ಹೊರೆಯಾಗದಂತೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರಾ ಎಂಬ ಪ್ರಶ್ನೆಗೆ ಕೆಲವೇ ಕ್ಷಣಗಳಲ್ಲಿ ಉತ್ತರ ಸಿಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...