
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ.
ವೃದ್ದಾಪ್ಯ ವೇತನ ಮಂಜೂರಾತಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ವೃದ್ಧರೊಬ್ಬರು ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನೋವು ತೋಡಿಕೊಂಡರು.
ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಇಲಾಖೆ ನಿರ್ದೇಶಕರನ್ನು ಕರೆಸಿ ತಾಂತ್ರಿಕ ತೊಂದರೆ ಇದ್ದರೆ ತಕ್ಷಣ ಬಗೆಹರಿಸಿ, ಸಿಬ್ಬಂದಿಯಿಂದ ತೊಂದರೆ ಆಗುತ್ತಿದ್ದರೆ ಅವರ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿ, ಅಸಹಾಯಕ ಬಡ ವೃದ್ಧರೊಬ್ಬರ ಸಮಸ್ಯೆಯನ್ನು ಸ್ಥಳದಲ್ಲೇ ಪರಿಹರಿಸಿದ್ದಾರೆ.