ಬೆಂಗಳೂರು : ಮುಡಾ ಕೇಸ್ ನಲ್ಲಿ ಇಡಿ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಇಬ್ಬರು ಕೂಡ ಪ್ರತ್ಯೇಕವಾಗಿ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ (ಜಾರಿ ನಿರ್ದೇಶನಾಲಯ)ಅಧಿಕಾರಿಗಳು 300 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದರೆ ಪತ್ನಿ ಪಾರ್ವತಿ ಎ2 ಆರೋಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ವಿಚಾರಣೆಗೆ ಕರೆದಿದೆ.