ಬೆಳಗಾವಿ : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಸಹಕಾರ ಬ್ಯಾಂಕು’ಗಳ ಸಾಲದ ಅಸಲು ಕಟ್ಟಿದ್ದರೇ ‘ಸಂಪೂರ್ಣ ಬಡ್ಡಿ’ ಮನ್ನಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇಂದು ಅಧಿವೇಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ರೈತರು ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು. ರಾಜ್ಯದ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿರುವಂತ ಸಾಲದ ಅಸಲು ಕಟ್ಟಿದರೆ , ಅದರ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಬಿಜೆಪಿಯವರು “ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು” ಎಂದು ಹೇಳಿದ್ದರು. ಆದರೆ ಬಿಜೆಪಿಯವರು ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ” ಎಂದು ಅವಾಗ ಯಡಿಯೂರಪ್ಪ ಹೇಳಿದ್ದರು ಎಂದು ಸಿಎಂ ಕಿಡಿಕಾರಿದರು.
ಕೆಲವೊಂದು ವೆಚ್ಚಗಳು ಬಜೆಟ್ ನಲ್ಲಿ ನಮೂದಾಗಿರುವುದಿಲ್ಲ
ಬಜೆಟ್ ನಂತರ ಯಾವುದೇ ಬಾಬ್ತಿಗೆ ಅನುದಾನ ಕಡಿಮೆಯಾಗಿದ್ದರೆ, ಅದಕ್ಕೆ ಹೆಚ್ಚು ದುಡ್ಡು ಬೇಕಾದಲ್ಲಿ, ಹೊಸ ಖರ್ಚು ಬಂದರೆ, ಅದಕ್ಕೆ ತಾತ್ಕಾಲಿಕವಾಗಿ contingency fund ನಿಂದ ಬಿಡುಗಡೆಯಾಗುತ್ತದೆ. ಬಜೆಟ್ ನಿಗದಿಪಡಿಸಿರುವ ಮಧ್ಯೆ ಅನುದಾನ ಬೇಕಾದರೆ, ಅಂತಹ ಖರ್ಚು ಮಾಡಿರುವುದಕ್ಕೆ ಪೂರಕ ಬಜೆಟ್ ಮಂಡಿಸಲಾಗುತ್ತದೆ. 2022-23 ರಲ್ಲಿ 13,573 ಕೋಟಿ ರೂ. notional ಉಳಿಕೆಯಾಗಿದೆ. ಈ ಮೊತ್ತವನ್ನು 3,27,747 ಕೋಟಿ ಈ ವರ್ಷದ ಖರ್ಚು ಇರುತ್ತದೆ, ಉಳಿಕೆ ಮೊತ್ತವನ್ನೂ ಸೇರಿಸಿ, 3,41,321 ಕೋಟಿ ರೂ. ಖರ್ಚಿಗೆ ಒಪ್ಪಿಗೆ ತೆಗೆದುಕೊಂಡಿರುತ್ತದೆ. ಯಾವುದೇ ಖರ್ಚು ಹಾಗೂ ಉಳಿಕೆಗಳಿಗೆ ಸದನದ ಒಪ್ಪಿಗೆ ಪಡೆಯಬೇಕಾಗುತ್ತದೆ.
ಸದನವೆಂಬುದು ಸಾರ್ವಭೌಮ, ಇಲ್ಲಿ ಒಪ್ಪಿಗೆ ದೊರೆಯಬೇಕು. notional expenditure ಕೂಡ ಬಜೆಟ್ ನಲ್ಲಿ ಸೇರಿ ರೂ.3,452.1 ಕೋಟಿ, outflow 2531 ಕೋಟಿ ರೂ. ಆಗಿರುತ್ತದೆ. ಕೆಲವೊಂದು ವೆಚ್ಚಗಳು ಬಜೆಟ್ ನಲ್ಲಿ ನಮೂದಾಗಿರುವುದಿಲ್ಲ. ಆದರೆ ಪ್ರಕೃತಿ ವಿಕೋಪ, ಬರ ಪರಿಸ್ಥಿತಿ ನಿರ್ವಹಿಸಲು ಇಂತಹ ಸಂದರ್ಭಗಳಲ್ಲಿ ಹೆಚ್ಚುವರಿ ದುಡ್ಡು ಖರ್ಚಾಗುತ್ತದೆ. ರೈತರಿಗೆ 2,000 ರೂ. ನೀಡುತ್ತಿರುವುದು ತಾತ್ಕಾಲಿಕ ಮೊದಲನೇ ಕಂತು. ನಂತರ ಕೇಂದ್ರದ ದುಡ್ಡು ಬಂದ ಮೇಲೆ ಪೂರ್ಣ input subsidy ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.