alex Certify BREAKING : ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಸಮಿತಿ ರಚಿಸಿದ ಕಾಂಗ್ರೆಸ್ : ಸಿಎಂ ಸಿದ್ದರಾಮಯ್ಯಗೂ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಸಮಿತಿ ರಚಿಸಿದ ಕಾಂಗ್ರೆಸ್ : ಸಿಎಂ ಸಿದ್ದರಾಮಯ್ಯಗೂ ಸ್ಥಾನ

ಬೆಂಗಳೂರು :  ಲೋಕಸಭೆ ಚುನಾವಣೆಗೆ ತಯಾರಿ ನಡೆಸಿದ ಕಾಂಗ್ರೆಸ್ ಪ್ರಣಾಳಿಕೆ ರಚಿಸಿದೆ. ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದಲ್ಲಿ 16 ಜನರ ಪ್ರಣಾಳಿಕೆ ಸಮಿತಿಯನ್ನ ಪ್ರಕಟ ಮಾಡಿದೆ. ಸಿಎಂ ಸಿದ್ದರಾಮಯ್ಯಗೂ ಸ್ಥಾನ ನೀಡಿದೆ.ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಮಾಹಿತಿ ನೀಡಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳು.

ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ ಜನ ಗುರುತಿಸುತ್ತಿದ್ದಾರೆ. ಪ್ರಣಾಳಿಕೆ ರಚನೆಯಲ್ಲಿ ನನಗೆ ಅವಕಾಶ ನೀಡಿರುವುದು ಈ ‘ಕರ್ನಾಟಕ ಮಾದರಿ ಆಡಳಿತ’ಕ್ಕೆ ಎಐಸಿಸಿ ನೀಡಿರುವ ಗೌರವ ಎಂದು ನಾನು ತಿಳಿದುಕೊಂಡಿದ್ದೇನೆ.

ಪಕ್ಷದ ಪ್ರಣಾಳಿಕೆ ಎನ್ನುವುದು ಕೇವಲ ಮತದಾರರಿಗೆ ನೀಡುವ ಭರವಸೆಗಳ ಪಟ್ಟಿ ಅಲ್ಲ, ಜನತೆಗೆ ನಾವು ನೀಡುವ ವಚನವಾಗಿದ್ದು ಅದನ್ನು ಅನುಷ್ಠಾನಕ್ಕೆ ತರುವುದು ನಿಜವಾದ ರಾಜಧರ್ಮ ಎಂದು ನಾನು ತಿಳಿದುಕೊಂಡವನು.
ಹಿಂದಿನ ನಮ್ಮ ಸರ್ಕಾರ ‘ಸರ್ವರಿಗೂ ಸಮಪಾಲು – ಸಮಬಾಳು’ ನೀಡುವ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಅನುಷ್ಠಾನಗೊಳಿಸಿ ಮಾದರಿ ಆಡಳಿತವನ್ನು ನೀಡಿ ಜನತೆಯ ವಿಶ್ವಾಸಾರ್ಹತೆಯನ್ನು ಗಳಿಸಿದ್ದೆವು. ಅದೇ ಹಾದಿಯಲ್ಲಿ ಈಗಿನ ಸರ್ಕಾರ ಕೂಡಾ ಮುನ್ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಜನತೆ ಕೂಡಾ ಕರ್ನಾಟಕ ಮಾದರಿ ಆಡಳಿತದ ಅನುಕೂಲಗಳನ್ನು ಪಡೆಯುವಂತಾಗಲಿ ಎಂದು ಹಾರೈಸುತ್ತೇನೆ.ನನ್ನ ಎಲ್ಲ ಯೋಚನೆ-ಯೋಜನೆಗಳಿಗೆ ಪ್ರೋತ್ಸಾಹ ನೀಡಿ ಹುರಿದುಂಬಿಸುತ್ತಿರುವ ಪಕ್ಷದ ಹಿರಿಯರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...