ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ಶುಕ್ರವಾರ ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿಯನ್ನು ಗುರುವಾರ ಬೆಳಿಗ್ಗೆ ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ರಾಷ್ಟ್ರ ರಾಜಧಾನಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ಅವರನ್ನ ದಾಖಲಿಸಲಾಗಿತ್ತು.
ಕಳೆದ ವರ್ಷ ಡಿಸೆಂಬರ್ನಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಫೆಬ್ರವರಿ 13 ರಂದು ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು,.