ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಬರ್ಬರ ಹತ್ಯೆಯೊಂದು ನಡೆದಿದ್ದು, ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರ ಚಂದ್ರಶೇಖರ್ ಚೌಲ್ ರನ್ನು ದುಷ್ಕರ್ಮಿಗಳು ಚಾಕು ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಚಂದ್ರೇಶಖರ್ ಚೌಲ್ ರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಯಾವ ಕಾರಣಕ್ಕೆ ಕೊಲೆಯಾಗಿದೆ ಎಂಬುದು ಪೊಲೀಸ್ ತನಿಖೆಯಿಂದ ತಿಳಿದಬರಬೇಕಿದೆ.
ಸದ್ಯ ಹತ್ಯೆಯಾಗಿರುವ ಸ್ಥಳಕೆಕ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.