alex Certify BREAKING : ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ ಫೆ.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ ಫೆ.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ ಫೆ.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಇಂದು ಕೇಂದ್ರದ ಮಧ್ಯಂತರ ಬಜೆಟ್’ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಡಿಸಿಎಂ ಡಿಕೆಶಿ ದೇಶದಲ್ಲಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್’ನಲ್ಲಿ ಅನ್ಯಾಯ ಮಾಡಿದ್ದು, ಈ ಬಜೆಟ್ನಿಂದ ನಮಗೆ ಬಹಳ ನಿರಾಸೆಯಾಗಿದೆ. ಇದರ ಬಗ್ಗೆ ಹೋರಾಟ ಮಾಡುವ ಕುರಿತು ನಿರ್ಧಾರ ಮಾಡುತ್ತೇವೆ. ಲೋಕಸಭೆ ಚುನಾವಣೆ ಹಿನ್ನೆಲೆ ಜನರಿಗೆ ಏನು ಕೊಡುತ್ತೇವೆ ಎಂಬ ದಿಕ್ಸೂಚಿಯನ್ನಾದರೂ ಹೇಳಬೇಕಿತ್ತು ಎಂದರು.

ರಾಜ್ಯಕ್ಕೆ ಹಲವು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿತ್ತು. ಎಲ್ಲವೂ ಹುಸಿಯಾಗಿದೆ. ಬಿಜೆಪಿ ಸಂಸದರು ಈ ಕುರಿತು ಪ್ರಶ್ನೆ ಮಾಡಿ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ತಂದಿರುವ ಜನಪರ ಯೋಜನೆಗಳನ್ನು ನೋಡಿಯಾದರೂ ಕೇಂದ್ರ ಸರಕಾರ ಬಜೆಟ್ ಮಂಡಿಸಬಹುದಿತ್ತು. ಈಗಾಗಲೇ ದೇಶವನ್ನು ಸಾಲದ ಸುಳಿಗೆ ಸಿಲುಕಿಸಿರುವ ಕೇಂದ್ರ ಬಿಜೆಪಿ ಸರ್ಕಾರ ದೇಶದ ಜನರ ಮೇಲೆ ಮತ್ತಷ್ಟು ಹೊರೆ ಹೊರಿಸುವುದರಲ್ಲಿ ಸಂದೇಹವಿಲ್ಲ ಎಂದರು.

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗ್ತಿದೆ, ಆದ್ದರಿಂದ ಕೇಂದ್ರದ ಮಲತಾಯಿ ಧೋರಣಿ ವಿರೋಧಿಸಿ ದೆಹಲಿಯಲ್ಲಿ ಫೆ.7 ರಂದು ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.

Tele ICU ಕ್ಲಸ್ಟರ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಇಂದು ಬೆಂಗಳೂರು ಮತ್ತು ಬಳ್ಳಾರಿ ಜಿಲ್ಲಾ ಆಸ್ಪತ್ರೆಯನ್ನು 20 ತಾಲೂಕು ಆಸ್ಪತ್ರೆಗಳಿಗೆ ಸಂಪರ್ಕಿಸುವ Tele ICU ಕ್ಲಸ್ಟರ್ ಅನ್ನು ಡಿಸಿಎಂ ಡಿಕೆಶಿ ಉದ್ಘಾಟಿಸಿದರು.

ಆರೋಗ್ಯ ಹಾಗೂ ವೈದ್ಯಕೀಯ ಸೇವೆಗಳ ಅಭಿವೃದ್ದಿಗಾಗಿ ನಮ್ಮ ಸರ್ಕಾರ ಅವಿರತವಾಗಿ ಶ್ರಮಿಸುತ್ತಿದ್ದು, ಆರೋಗ್ಯ ಇಲಾಖೆಯ ವತಿಯಿಂದ ಹಲವಾರು ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ. ಅದರಂತೆ ಇಂದು ಹತ್ತು ಐಸಿಯು ಬೆಡ್’ಗಳ ಯೋಜನೆಯ ಭಾಗವಾಗಿ Tele ICU ಕ್ಲಸ್ಟರ್ ಅನ್ನು ಉದ್ಘಾಟಿಸಲಾಗಿದೆ.

ಈ ಯೋಜನೆಯು ಪ್ರಮುಖವಾಗಿ ತಾಲೂಕು ಮಟ್ಟದ ಸರಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಐಸಿಯು ವೈದ್ಯಕೀಯ ಉಪಕರಣಗಳನ್ನು ಒದಗಿಸುವುದು ಮತ್ತು ಅಳವಡಿಸುವುದು ಸೇರಿದಂತೆ, ವೈದ್ಯರಿಗೆ ಮೂಲಭೂತ ಮತ್ತು ಸುಧಾರಿತ ಕ್ರಿಟಿಕಲ್ ಕೇರ್ ತರಬೇತಿ ನೀಡುವ ಅಂಶಗಳನ್ನು ಒಳಗೊಂಡಿದೆ. ನಮ್ಮ ರಾಜ್ಯ ಭಾರತದಲ್ಲೇ ಅತಿ ಹೆಚ್ಚು ಮೆಡಿಕಲ್ ಕಾಲೇಜುಗಳನ್ನು ಹೊಂದಿರುವ ಹೆಗ್ಗಳಿಕೆ ಪಡೆದಿದೆ ವೈದ್ಯಕೀಯ ಕ್ಷೇತ್ರದಲ್ಲಿ ರಾಜ್ಯದ ಪ್ರಗತಿ ಅತ್ಯುತ್ತಮ ಮಟ್ಟದಲ್ಲಿದ್ದು, ಜನರ ಆರೋಗ್ಯದ ಕಾಳಜಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...