ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ‘ವಂದನಾ ನಿರ್ಣಯ’ಕ್ಕೆ ಉತ್ತರ ನೀಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ದಾಟುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 400 ಸ್ಥಾನಗಳನ್ನು ಗೆಲ್ಲಲಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ.
ಖರ್ಗೆ ಅವರು ಬಿಜೆಪಿಗೆ 400 ಪಾರ್ ಆಶೀರ್ವಾದ ನೀಡಿದ್ದಾರೆ. ಮತ್ತೆ ಆ ರೀತಿ ಹೇಳಲು ಅವರಿಗೆ ಯಾವಾಗ ಅವಕಾಶ ಸಿಗುತ್ತದೆ? ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯಕ್ಕೆ ಉತ್ತರಿಸುವಾಗ ಪ್ರಧಾನಿ ಮೋದಿ ಈ ವಿಷಯ ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಮತ್ತು ಬಿಜೆಪಿ ಕನಿಷ್ಠ 370 ಸ್ಥಾನಗಳನ್ನು ಗೆಲ್ಲುತ್ತದೆ, ಕಾಂಗ್ರೆಸ್ ಆಲೋಚನೆಗಳು ಔಟ್ ಡೇಟೆಡ್ ಆಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ವಿರೋಧ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯವನ್ನು ಕಳೆದುಕೊಂಡಿವೆ ಮತ್ತು ದೀರ್ಘಕಾಲದವರೆಗೆ ವಿರೋಧ ಪಕ್ಷದ ಸ್ಥಾನದಲ್ಲಿ ಉಳಿಯಲು ನಿರ್ಧರಿಸಿವೆ ಎಂದು ತಮಗೆ ಮನವರಿಕೆಯಾಗಿದೆ ಎಂದು ಮೋದಿ ಹೇಳಿದರು.”ನಾನು ರಾಷ್ಟ್ರದ ಮನಸ್ಥಿತಿಯನ್ನು ಅಳೆಯಬಲ್ಲೆ, ಇದು ಖಂಡಿತವಾಗಿಯೂ ಎನ್ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ಮತ್ತು ಬಿಜೆಪಿಗೆ ಕನಿಷ್ಠ 370 ಸ್ಥಾನಗಳನ್ನು ನೀಡುತ್ತದೆ” ಎಂದು ಪ್ರಧಾನಿ ಹೇಳಿದರು.