![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಚಿತ್ರದುರ್ಗ : ಹಿರಿಯೂರಿನಲ್ಲಿ ತಡರಾತ್ರಿ ಟಯರ್ ಬ್ಲ್ಯಾಸ್ಟ್ ಆಗಿ ಕಂಟೇನರ್ ಲಾರಿಯೊಂದು ಹೊತ್ತಿ ಉರಿದ ಘಟನೆ ನಡೆದಿದೆ.
ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಟಯರ್ ಸ್ಪೋಟಗೊಂಡು ಕಂಟೇನರ್ ಲಾರಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.