ಹೊಸಪೇಟೆ : ಕಲುಷಿತ ನೀರು 18 ಮಂದಿ ಅಸ್ವಸ್ಥಗೊಂಡು ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಹೊಸಪೇಟೆ ತಾಲೂಕಿನ ನಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಪಂಚಾಯಿತಿ ಅಧಿಕಾರಿಗಳು ಕುಡಿಯುವ ನೀರಿನ ಟ್ಯಾಂಕರ್ ಶುಚಿ ಮಾಡದ ಹಿನ್ನೆಲೆ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕಲುಷಿತ ನೀರು ಸೇವಿಸಿ ಗ್ರಾಮದ 18 ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಸದ್ಯ, ನೀರಿನ ಸ್ಯಾಂಪಲ್ ನ್ನು ಅಧಿಕಾರಿಗಳು ತಪಾಸಣೆಗೆ ಕಳುಹಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.