ಕಲಬುರಗಿ : ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಆಂದೋಲಾ ಶ್ರೀ ಸಿದ್ದಲಿಂಗ ಸ್ವಾಮೀಜಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಬಗ್ಗೆ ತನಿಖೆ ನಡೆಸಲು ಜ.29 ಅಥವಾ ಜ.30 ರಂದು ಒಂದು ದಿನ ಬೆಂಗಳೂರಿನ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಸಾವಿಗೂ ಮುನ್ನ ಸಚಿನ್ ಡೆತ್ ನೋಟ್ ಬರೆದಿಟ್ಟಿದ್ದರು. ಡೆತ್ ನೋಟ್ ನಲ್ಲಿ ಸಿದ್ದಲಿಂಗ ಸ್ವಾಮೀಜಿ, ಚಿತ್ತಾಪುರದ ಮಣಿಕಂಠ ರಾಠೋಡ್ ಹಾಗೂ ಶಾಸಕ ಬಸವರಾಜ್ ಮತ್ತಿಮೂಡ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಉಲ್ಲೇಖಿಸಲಾಗಿತ್ತು, ಈ ಬಗ್ಗೆ ವಿಚಾರಣೆ ನಡೆಸಲು ಸಿಐಡಿ ನೋಟಿಸ್ ನೀಡಿದೆ.