ಬೀದರ್: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ ಐವರನ್ನು ಬಂಧಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ ಐವರನ್ನು ಸಿಐಡಿ ಪೊಲೀಸರು 5 ದಿನ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ 8 ಜನರಿಗೆ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಬೀದರ್ ರೈಲ್ವೆ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ ಐವರನ್ನು ಬಂಧಿಸಿದ್ದಾರೆ
ರಾಜು ಕಪನೂರ್, ನಂದಕುಮಾರ್, ಘೋರಕನಾಥ್, ರಾಮನಗೌಡ ಹಾಗೂ ಸತೀಶ್ ಬಂಧಿತರು. ಡಿ.26ರಂದು ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ನಲ್ಲಿ 8 ಜನರ ವಿರುದ್ಧ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು 8 ಜನರಿಗೆ ನೋಟಿಸ್ ನೀಡಿದ್ದರು.