ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿಗೆ 20 ಲಕ್ಷ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.
ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ನ್ಯಾಯ ಎಲ್ಲಿದೆ ? ಹಾಗೂ ಗಾಳಿ ಮಾತು ಸಿನಿಮಾದ ಹಾಡುಗಳನ್ನು ಬಳಕೆ ಮಾಡಲಾಗಿದೆ ಎಂದು ಎಂಆರ್ ಟಿ ಮ್ಯೂಸಿಕ್ ಸಂಸ್ಥೆಯು ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಕಾಪಿರೈಟ್ ವಿಚಾರವನ್ನು ಉಲ್ಲೇಖಿಸಿ ನ್ಯಾಯಕ್ಕೆ ಆಗ್ರಹಿಸಿತ್ತು. ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನಟ ರಕ್ಷಿತ್ ಶೆಟ್ಟಿಗೆ 20 ಲಕ್ಷ ಠೇವಣಿ ನೀಡುವಂತೆ ನಿರ್ದೇಶಿಸಿದೆ.
ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ನ್ಯಾಯ ಎಲ್ಲಿದೆ? ಹಾಗೂ ಗಾಳಿ ಮಾತು ಸಿನಿಮಾದ ಹಾಡುಗಳನ್ನು ಅನಧಿಕೃತವಾಗಿ ರಕ್ಷಿತ್ ಶೆಟ್ಟಿ ತಮ್ಮ ಸಿನಿಮಾದಲ್ಲಿ ಬಳಸಿದ್ದಾರೆ ಎಂದು ಎಂಆರ್ ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ್ದರು.