ಬೆಂಗಳೂರು : ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಿದೆ.
ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಇಂದು ಮಧ್ಯಾಹ್ನದೊಳಗೆ ಅಭ್ಯರ್ಥಿಯ ಭವಿಷ್ಯ ನಿರ್ಧಾರವಾಗಲಿದೆ.
ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಿದೆ. ಮತ ಎಣಿಕೆ ಅಂಗವಾಗಿ ಆಯಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ ಸಿಆರ್ಪಿಎಫ್, ಸಿಎಎಸ್ಎಫ್, ಕೆಎಸ್ಆರ್ಪಿ ಮತ್ತು ಸಿವಿಲ್ ಪೊಲೀಸ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.