
ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹೊಲದಲ್ಲಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬಿಜಗರಣಿ ಗ್ರಾಮದಲ್ಲಿ ನಡೆದಿದೆ.
ಬಿಜಗರಣಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಕಟ್ ಆಗಿ ಬಿದ್ದಿತ್ತು. ಇದನ್ನು ಗಮನಿಸಿದೇ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ದಂಪತಿ ಸಾವನ್ನಪ್ಪಿದ್ದಾರೆ. ಬಿಜಗರಣಿ ಗ್ರಾಮದ ನಿವಾಸಿ ನಿಸ್ಸಾರ್ ಅಹ್ಮದ್ ಮಕ್ಬೂಲ್ ಸಾಬ್ ಸನದಿ (32) ಹಾಗೂ ಪತ್ನಿ ಲತಾ ನಿಸ್ಸಾರ್ ಅಹ್ಮದ್ ಸನದಿ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಗೆ ಹೆಸ್ಕಾಂ ಅಧಿಕಾರಿಗಳೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.