![](https://kannadadunia.com/wp-content/uploads/2023/09/Narayanagowda.jpg)
ಬೆಂಗಳೂರು : ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು.
ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದು ಜೆಎಂಎಫ್ ಸಿ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಜೆಎಂಎಫ್ ಸಿ ನ್ಯಾಯಾಲಯವು ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.
ನಾರಾಯಣ ಗೌಡ ಸೇರಿದಂತೆ 29 ಕಾರ್ಯಕರ್ತರಿಗೆ ಜನವರಿ ೧೦ ರವರೆಗೆ ಅಂದರೆ ಒಟ್ಟು ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ಹೊರಡಿಸಿದ್ದು, ಸದ್ಯ ಇವರನ್ನು ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.