ಬೆಂಗಳುರು : ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೋರ್ಟ್ ಸಮನ್ಸ್ ನೀಡಿದೆ.
ಆ.29 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಸಮನ್ಸ್ ನೀಡಿದೆ.ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ ನಡೆಸಿದ್ದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಕೋರ್ಟ್ ಸಮನ್ಸ್ ನೀಡಿದೆ.
2022 ರಲ್ಲಿ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆಯನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದ ಕಾಂಗ್ರೆಸ್ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಲ್ಸನ್ ಗಾರ್ಡ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆಯನ್ನು ಖಂಡಿಸಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ.