alex Certify BREAKING : ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ |C.P Yogeshwar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ |C.P Yogeshwar

ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶಿಸಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಸಿ.ಪಿ ಯೋಗೇಶ್ವರ್ ಭರ್ಜರಿ ರೋಡ್ ಶೋ ನಡೆಸಿದರು. ಭರ್ಜರಿ ರೋಡ್ ಶೋ ನಡೆಸಿದ ಬಳಿಕ ಸಿ.ಪಿ ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸಿ.ಪಿ ಯೋಗೇಶ್ವರ್ ಅವರಿಗೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವರು ಸಾಥ್ ನೀಡಿದರು.

ಇತ್ತೀಚೆಗೆ ಸಿ.ಪಿ ಯೋಗೇಶ್ವರ್ ಬಿಜೆಪಿ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇ್ರ್ಪಡೆಯಾಗಿದ್ದರು. ಇಂದು ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಮಾತನಾಡಿದ ಸಿ .ಪಿ ಯೋಗೇಶ್ವರ್ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಜೀವನ ಆರಂಭಿಸಿದ್ದೆ. ನಂತರ ಕಾಂಗ್ರೆಸ್ ಪಕ್ಷ ಬಿಟ್ಟಿದ್ದೆ. ಈಗ ಮತ್ತೆ ಬಂದಿದ್ದೇನೆ. ನನ್ನ ಮುಂದಿನ ರಾಜಕೀಯ ಭಾಗ ಕಾಂಗ್ರೆಸ್ನಲ್ಲಿ ಮುಂದುವರಿಯಲಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಗಳಿಂದ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವೇ ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಅದೇ ಸಂದರ್ಭ ನನಗೆ ಬಂದಿದೆ. ನಾನಿದ್ದ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷ ಸೇರಿಕೊಂಡ ನಂತರ ಎನ್ಡಿಎ ಮೈತ್ರಿಕೂಟದಲ್ಲಿ ಇದ್ದ ವಾತಾವರಣ ನನ್ನ ರಾಜಕೀಯ ಬೆಳವಣಿಗೆಗೆ ಪೂರಕವಾಗಿರಲಿಲ್ಲ ಎಂದು ಮನಗಂಡು ಸ್ವಯಂಪ್ರೇರಿತವಾಗಿ ಬೇಷರತ್ತಾಗಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಎಂದಿದ್ದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...