ನವದೆಹಲಿ: ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಪ್ರಸ್ತುತ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ನಲ್ಲಿ ಐಸಿಯುನಲ್ಲಿದ್ದಾರೆ ಎಂದು ಪಕ್ಷ ಮಂಗಳವಾರ ತಿಳಿಸಿದೆ.
ಅವರು ಸದ್ಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ ಮತ್ತು ತೀವ್ರ ಉಸಿರಾಟದ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಸೀತಾರಾಮ್ ಯೆಚೂರಿ ಅವರನ್ನು ಆಗಸ್ಟ್ 19 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ನಿಧನದ ನಂತರ ಯೆಚೂರಿ ಆಗಸ್ಟ್ 22 ರಂದು ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ 6 ನಿಮಿಷಗಳ ವೀಡಿಯೊವನ್ನು ಬಿಡುಗಡೆ ಮಾಡಿದ್ದರು.ಆಗಸ್ಟ್ 23 ರಂದು, ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸಿಪಿಐ (ಎಂ), ಕಾಂಗ್ರೆಸ್ ಮತ್ತು ಎನ್ಸಿ ನಡುವಿನ ಒಗ್ಗಟ್ಟಿನ ಸಂದೇಶವನ್ನು ಪೋಸ್ಟ್ ಮಾಡಿದ್ದರು.