ಬೆಂಗಳೂರು : ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ.
ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರದಿಂದ ಎಸ್ಐಟಿ ರಚಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ನಾಲ್ವರು ಐಪಿಎಸ್ ಅಧಿಕಾರಿಗಳ ಎಸ್ಐಟಿಯನ್ನು ರಾಜ್ಯ ಸರ್ಕಾರ ರಚಿಸಿದೆ. ಐಪಿಎಸ್ ಅಧಿಕಾರಿ, ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್ ಖರ್ಬಿಕರ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ.