ಬೆಂಗಳೂರು : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟಗೊಂಡು ದುರಂತ ಸಂಭವಿಸಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದೆ.ಸಿಲಿಂಡರ್ ಸ್ಪೋಟಕ್ಕೆ ಮನೆ ಛಿದ್ರ ಛಿದ್ರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ.
ಸಿಲಿಂಡರ್ ಸ್ಪೋಟದ ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಪೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಛಿದ್ರ ಛಿದ್ರವಾಗಿದೆ. ಪರಿಣಾಮ ಮನೆಯ ಪಕ್ಕದಲ್ಲಿದ್ದ ಹಲವು ಬೈಕ್ ಗಳು ಜಖಂ ಆಗಿದೆ.ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.