ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಪುಲಕೇಶಿನಗರದಲ್ಲಿ ಈ ಘಟನೆ ನಡೆದಿದೆ. ಬೆಳ್ಳಂ ಬೆಳಗ್ಗೆ 5 ಗಂಟೆಗೆಅಪಾರ್ಟ್ ಮೆಂಟ್ ನ ಮೊದಲ ಫ್ಲ್ಯಾಟ್ ನಲ್ಲಿ ಈ ಅವಘಡ ಸಂಭವಿಸಿದ್ದು, ಭಾರಿ ಅನಾಹುತ ತಪ್ಪಿದೆ.
ಒಟ್ಟಿಗೆ 4 ಎಲ್’ಪಿಜಿ ಸಿಲಿಂಡರ್ ಇದ್ದ ಸ್ಥಳದಲ್ಲಿ ಸ್ಪೋಟ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.